Friday, June 19, 2009
ಅವಳದ್ದು ರಾಜಧಾನಿ ಎಕ್ಸ್ ಪ್ರೆಸ್, ನಂದು ಹಂಪಿ ಎಕ್ಸ್ ಪ್ರೆಸ್ !
Tuesday, May 26, 2009
ಬ್ಲಾಗು, ಹೂಂಸು ಮತ್ತು ಬಕ್‌ಬಕ್!
ಬಹಳ ಜನರಿಗೆ ಬ್ಲಾಗು ಬೋರಾಗುತ್ತಿದೆ!
ನಾವು ಭಾರತೀಯರೇ ಹಾಗೆ. ನಮಗೆ ಆರಂಭ ಶೂರತ್ವ. ಬ್ಲಾಗು ಎಂಬ ಹೊಸ ಲೋಕ ತೆರೆದುಕೊಂಡಾಗ ಎಲ್ಲರೂ ಬ್ಲಾಗು ಆರಂಭಿಸಿದ್ದೇ ಆರಂಭಿಸಿದ್ದು. ಈಗ ಬಹುತೇಕ ಜನ ಅದನ್ನು ನಿಲ್ಲಿಸಿದ್ದಾರೆ. ನನ್ನಂಥ ಕೆಲವರು ಆಗಾಗ ನೆಪಕ್ಕೆ ಏನೋ ಬರೆದು ಸುಮ್ಮನಾಗುತ್ತಿದ್ದಾರೆ.
ಬ್ಲಾಗಿನ ಬಗೆಗಿದ್ದ ಬೆರಗು ಕಡಿಮೆಯಾಗಿದೆ. ಬರೆಯುವ ತೆವಲು ತೀರಿದೆ!
ನನ್ನ ಬಹಳ ಆತ್ಮೀಯರೊಬ್ಬರು ಯಾವಾಗಲು ಬ್ಲಾಗು ಬರವಣಿಗೆಯನ್ನು ಟೀಕಿಸುತ್ತಿರುತ್ತಾರೆ. ಅವರು ಇತ್ತೀಚೆಗೆ ಬ್ಲಾಗಿನ ಬಗ್ಗೆ ಹೇಳುತ್ತ ‘ಬ್ಲಾಗೆಂದರೆ ಒಂದು ಕೋಣೆಯಲ್ಲಿ ಒಬ್ಬನೇ ಕುಳಿತು ಹೂಂಸು ಬಿಟ್ಟು ಒಬ್ಬನೇ ಆಸ್ವಾದಿಸಿದಂತೆ’ ಎಂದು ವ್ಯಾಖ್ಯಾನಿಸಿದ್ದರು.
ಅವರ ಮಾತಿಗೆ ನಾನು ನಕ್ಕು ಸುಮ್ಮನಾಗಿದ್ದೆ. ಆದರೆ ನಂತರ ಯೋಚಿಸುವಾಗ ಬ್ಲಾಗೆಂದರೆ ಒಬ್ಬನೇ ಹೂಂಸು ಬಿಟ್ಟು ಒಬ್ಬನೇ ಆಸ್ವಾದಿಸುವುದಾದರೆ, ಪತ್ರಿಕೆಗಳಿಗೆ ಬರೆಯುವುದು ಹೂಂಸು ಬಿಟ್ಟು ಊರಿಗೆಲ್ಲ ನಾಥ ಕೊಟ್ಟಂತೆಯಾ? ಎಂಬ ಅನುಮಾನ ಶುರುವಾಗಿಬಿಟ್ಟಿತು!
ಬ್ಲಾಗು ಯಾರು ಓದುತ್ತಾರೆ? ಓದಿದರೂ ಎಷ್ಟು ಜನ ಓದಿಯಾರು? ಅದರಿಂದ ಸಿಗುವುದೇನು? ಬ್ಲಾಗಿಗೆ ಬರೆಯುವ ಸಮಯವನ್ನು ಬೇರೆಯದಕ್ಕೆ ಬಳಸಿಕೊಳ್ಳಬಹುದಲ್ಲವಾ? ಎಂಬುದು ಅವರ ಪ್ರಶ್ನೆ.
ಅದು ಸರಿಯೇ ಬ್ಲಾಗೇನು ಲಕ್ಷಾಂತರ ಜನ ಓದುವುದಿಲ್ಲ. ಆದರೆ ನಮಗೆ ಅನ್ನಿಸಿದ್ದನ್ನೆಲ್ಲ ಬರೆಯಲು ಬ್ಲಾಗೊಂದು ವೇದಿಕೆ ಅಷ್ಟೆ. ನಾಲ್ಕೇ ಜನ ಓದಲಿ. ಇಬ್ಬರೇ ಪ್ರತಿಕ್ರಿಯಿಸಲಿ. ಅಷ್ಟೇ ಸಮಾದಾನ. ನನ್ನ ಮನದೊಳಗಿನ ಮಾತನ್ನು ಒಂದಿಬ್ಬರಾದರೂ ಕೇಳಿಸಿಕೊಂಡರೆ ಅಷ್ಟೇ ಸಾಕು. ಅದಕ್ಕಾಗಿ ಬ್ಲಾಗು ಬರೆಯೋದು.
ಲಕ್ಷಾಂತರ ಜನ ಓದಲಿ, ನೋಡಲಿ. ಅದರಿಂದ ನನಗೆ ಸಾವಿರಾರು ಆದಾಯ ಬರಲಿ ಎಂದು ಬಯಸುವವರು ಖಂಡಿತ ಬ್ಲಾಗು ಬರೆಯುವುದಿಲ್ಲ.
ಅವರು ಧಾರಾವಾಹಿ ಬರೆಯುತ್ತಾರೆ!
ಬರವಣಿಗೆಯ ಲೋಕದಲ್ಲಿ ಅಂಬೆಗಾಲಿಡುತ್ತಿರುವ ನನ್ನಂಥಹ ಅದೆಷ್ಟೋ ಮಂದಿಗೆ ಬ್ಲಾಗು ಸಹಾಯಮಾಡಿದೆ. ನಮಗನ್ನಿಸಿದ್ದನ್ನು ಬರೆದು, ಅದರ ಬಗ್ಗೆ ಬೇರೆಯವರ ಅಭಿಪ್ರಾಯ ತಿಳಿದುಕೊಳ್ಳಲು, ನಮ್ಮ ಬರವಣಿಗೆ ಶೈಲಿ ಉತ್ತಮ ಪಡಿಸಿಕೊಳ್ಳಲು ಬ್ಲಾಗು ಸಾಧನವಾಗಿದೆ. ಇದರಿಂದಲೇ ಪರಿಚಯವಾದರು ಅದೆಷ್ಟೋ ಮಂದಿ. ಅವರ ಊರು, ಜಾತಿ ಯಾವುದೂ ಗೊತ್ತಿಲ್ಲ. ಬ್ಲಾಗು ಗೆಳೆತನಕ್ಕೂ ದಾರಿ ಮಾಡಿಕೊಟ್ಟಿದೆ.
ಹಾಗಂತ ಬ್ಲಾಗೇನು ಮಹಾ ಸುಬಗರ ಬೀಡಾಗೇನೂ ಉಳಿದಿಲ್ಲ. ಹುಡುಗಿಯರ ಬ್ಲಾಗಿಗೆ ಕೆಟ್ಟ ಕಾಮೆಂಟು ಹಾಕುವ, ಅನಾಮಧೇಯವಾಗಿ ಅನಗತ್ಯ ಟೀಕಿಸಿ ಬರೆಯುವವರೂ ಬ್ಲಾಗನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ನಮಗಾಗದವರ ಬಗ್ಗೆ ಬರೆಯಲೂ ಬಳಸಿದ್ದಾರೆ. ಏನೇನೋ ಬರೆಯುತ್ತೇನೆ ಎಂದು ಹೆದರಿಸುವವರೂ ಇದ್ದಾರೆ. ನನಗೆ ಬಹಳ ಗೊತ್ತಿದೆ ಎಂದು ಆತ್ಮ ರತಿಯಲ್ಲಿ ಮುಳುಗಿದವರೂ ಇದ್ದಾರೆ.
ಇದೆಲ್ಲ ಏನೇ ಇರಲಿ ಬ್ಲಾಗಿಗೆ ಮೊದಲಿನ ಬೆರಗು ಉಳಿದಿಲ್ಲ ಎಂಬುದಂತೂ ಸತ್ಯ. ಅದೇನು ಬ್ಲಾಗಿನ ಸಂಖ್ಯೆ ಹೆಚ್ಚಾಗಿದ್ದಕ್ಕೋ ಅಥವಾ ದಿನಕಳೆದಂತೆ ಪ್ರತಿಯೊಂದೂ ಆಕರ್ಷಣೆ ಕಳೆದುಕೊಳ್ಳುತ್ತದೆ ಎಂಬ ನಿಯಮ ಬ್ಲಾಗಿಗೂ ಅನ್ವಯವಾದದ್ದಕ್ಕೋ ತಿಳಿಯದಾಗಿದೆ.
ಅಂತೂ ಒಬ್ಬರು ಬ್ಲಾಗು ಟೀಕಿಸಿದ್ದಕ್ಕೆ ಈ ಚಿಕ್ಕ ಬರಹ ಹುಟ್ಟಿಕೊಂಡಿತು. ಇಂಥದ್ದನ್ನೆಲ್ಲ ಬ್ಲಾಗಿನಲ್ಲಿ ಬರೆಯದೇ ವಿಜಯ ಕರ್ನಾಟಕದಲ್ಲಿ ಪ್ರಕಟಿಸಲು ಸಾದ್ಯವೇ? ಅಥವಾ ಇಂಥದ್ದಕ್ಕಾಗಿ ನಾನೇ ಒಂದು ಪತ್ರಿಕೆ ಆರಂಭಿಸೋದು ಸಾದ್ಯವೇ? ಇಲ್ಲ.
ಹೀಗಾಗಿ ಬ್ಲಾಗು. ಇದಕ್ಕೇನು ಮಹಾ ಸಮಯ ಬೇಕಾಗಿಲ್ಲ. ಇದಿಷ್ಟು ಬರೆಯಲು ೫ ನಿಮಿಷ ಸಾಕು. ಆದ್ದರಿಂದ ಬ್ಲಾಗು ಬರವಣಿಗೆಯಿಂದ ಮಹಾ ಸಮಯ ಹಾಳು ಎಂಬುದು ಸರಿಯಲ್ಲ ಎಂಬುದು ನನ್ನ ವಾದ.
ಹೂಂ ಅಂತೀರಾ? ಉಹೂಂ ಅಂತೀರಾ?
Monday, May 18, 2009
ಕರಗಿದ ಬಿಜೆಪಿಯ ಉಕ್ಕಿನ ಮನುಷ್ಯ
Wednesday, May 13, 2009
ಸಿಬಿಐ= ಕ್ಲೀನ್‌ಚಿಟ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್
Wednesday, April 29, 2009
ಸೋನಿಯಾಗೆ ಚಿದ್ರಚಿದ್ರವಾದ ರಾಜೀವ್ ದೇಹ ನೆನಪಾಗಲಿಲ್ಲವೇ?
Friday, April 24, 2009
ಕಪ್ಪು ಹಣ ತರುವುದು ಹೇಳಿದಷ್ಟು ಸುಲಭವೇ?
ಯಾರೂ ನಿರೀಕ್ಷಿಸದ ರೀತಿಯಲ್ಲಿ ೨೦೦೯ರ ಲೋಕಸಭಾ ಚುನಾವಣಾ ವಿಷಯವಾಗಿ ಹೊರಹೊಮ್ಮಿದ್ದು ಸ್ವಿಸ್ ಬ್ಯಾಂಕ್‌ನಲ್ಲಿರುವ ಕಪ್ಪು ಹಣ. ಚುನಾವಣೆ ಘೊಷಣೆಯಾಗುವವರೆಗೂ ಇದೊಂದು ಚುನಾವಣಾ ವಿಷಯ ಅಂತ ಯಾರಿಗೂ ಅನಿಸಿರಲೇ ಇಲ್ಲ. ಹಾಗಾಗಬಹುದು ಎಂಬ ಕಲ್ಪನೆಯೂ ಇರಲಿಲ್ಲ. ಆದರೆ ಬಿಜೆಪಿ ಚುನಾವಣಾ ವಿಷಯವೆಂದು ಪರಿಗಣಿಸಿದ್ದ ಹಣದುಬ್ಬರ ಕಡಿಮೆಯಾಗಿ, ದರಗಳು ಸ್ವಲ್ಪ ನಿಯಂತ್ರಣಕ್ಕೆ ಬಂದಿದ್ದರಿಂದ ಅದನ್ನು ಚುನಾವಣಾ ವಿಷಯವಾಗಿ ಬಳಸಿಕೊಳ್ಳೂವುದು ಸಾದ್ಯವಿರಲಿಲ್ಲ. ಭಯೋತ್ಪಾದನೆ ಬಗ್ಗೆ ಮಾತಾಡ ಹೊರಟರೆ ಕಾಂಗ್ರೆಸ್ಸಿಗರು ‘ಕಂದಹಾರ್ ಪ್ರಕರಣ’ವನ್ನು ಪ್ರತಿ ಅಸ್ತ್ರವಾಗಿ ಬಳಸಿದರು.
Tuesday, April 07, 2009
ಹಿಂದೂ ಪರವೆಂದರೆ ಮುಸ್ಲಿಮರನ್ನು ವಿರೋಧಿಸುವುದೇ?
Thursday, March 26, 2009
ಫಿರಾಕ್: ಹೇಳೋ ಹಾಗಿಲ್ಲ ಬಹುಪರಾಕ್
Friday, March 20, 2009
ಅದು ಓದಿ ಬರೆದದ್ದು ಇದು!
ಧಾರಾವಾಡದ ಕಾಲೇಜೊಂದರಲ್ಲಿ ಒಂದು ದಿನ ಶಿವರಾಮ ಕಾರಂತರ ಉಪನ್ಯಾಸ ಕಾರ್ಯಕ್ರಮ ಇತ್ತಂತೆ. ಶಿವರಾಮ ಕಾರಂತ ಮಾತನಾಡುತ್ತಿದ್ದಾಗ ಒಬ್ಬಾಕೆ ವಿದ್ಯಾರ್ಥಿನಿ ಕೀಟಲೆ ಮಾಡುತ್ತಲೋ, ಅಕ್ಕಪಕ್ಕದವರಲ್ಲಿ ಮಾತನಾಡುತ್ತಲೋ ಇದ್ದಳಂತೆ. ಕೊನೆಗೆ ಕಾರ್ಯಕ್ರಮ ಮುಗಿದ ಬಳಿಕ ಆಕೆ ಕಾರಂತರಲ್ಲಿ ಅಟೋಗ್ರಾಫ್ ಕೊಡಿ ಪ್ಲೀಸ್ ಎಂದು ಕೇಳಿದಾಗ ಕಾರ್ಯಕ್ರಮದುದಕ್ಕೂ ಆಕೆಯ ಚಟುವಟಿಕೆಯನ್ನು ಗಮನಿಸಿದ್ದ ಕಾರಂತರು ಬರೆದದ್ದು;
'ನನ್ನ ಕೈಬರೆಹದಿಂದ ನಿನ್ನ ಹಣೆ ಬರೆಹವನ್ನು ತಿದ್ದಲಾಗದು!'
ಇಂಥಹದೊಂದು ಬರಹವನ್ನು ಗೆಳೆಯ ಮಿಥುನ್ ಬ್ಲಾಗಿಸಿದ್ದ. ಅದನ್ನು ಓದುತ್ತಿದ್ದಂತೆ ಬಹಳ ದಿನಗಳಿಂದ ಸುಮ್ಮನಿದ್ದ ನನ್ನ ಕೀಟಲೆ ಮನಸ್ಸು ಜಾಗೃತವಾಯಿತು. ಆಗ ಹೀಗೆ ಅನಿಸಿತು.....
* ಹಣೆ ಬರಹದಿಂದಲೂ ಕೆಲವರ ಕೈ ಬರಹ ತಿದ್ದಲು ಸಾದ್ಯವಿಲ್ಲ!
* ಕೈ ಬರಹ ಚೆನ್ನಾಗಿದ್ದವರ ಹಣೆ ಬರಹವೂ ಚೆನ್ನಾಗಿರುತ್ತದೆ ಎನ್ನಲಾಗುವುದಿಲ್ಲ!
* ಹಣೆ ಬರಹ ಬರೆದವನ ಕೈ ಬರಹ ಕೆಟ್ಟದಾಗಿದ್ದರೆ ಹಣೆ ಬರಹವೂ ಕೆಟ್ಟದಾಗಿರುತ್ತದೆ!
* ಅಕ್ಷರಸ್ಥ ಕೂಡ ಹಣೆಬರಹ ಓದಲಾರ!
* ಹಣೆ ಬರಹ ಓದಬಲ್ಲವನೇ ನಿಜವಾದ ಅಕ್ಷರಸ್ಥ!
* ಹಾಗಾದರೆ ಜಗತ್ತಿನ ತುಂಬ ಅನಕ್ಷರಸ್ಥರೆ!
* ಹಣೆಬರಹ ಬರೆಯಲು ದೇವರು ಅದೆಷ್ಟು ಮೊದಲೇ ಪರ್ಮನೆಂಟ್ ಮಾರ್ಕರ್ ಪೆನ್ನು ಕಂಡುಹಿಡಿದಿದ್ದ!
* ಹಣೆಬರಹ ಕೆಟ್ಟದಾಗಿದ್ದರೂ ಕೈ ಬರಹ ಕೆಟ್ಟದಾಗಿರಬೇಕಿಲ್ಲ!
* ಹಣೆಬರಹ ಬರೆಯುವುದೇ ನಿನ್ನ ಹಣೆಬರಹ ಅಂತ ಆತನ ಹಣೆಮೇಲೆ ಬರೆದವರಾರು!
Thursday, March 19, 2009
ನಗ್ಮ ದರ್ಶನ!
ಫೇಮಸ್ ಚಿತ್ರನಟಿಯೊಬ್ಬರು ದಿಢೀರನೆ ಸಿಕ್ಕರೆ ನೀವೇನು ಮಾಡುತ್ತೀರಿ? ಹೋಗಿ ಕೈ ಕುಲುಕುತ್ತೀರಿ. ಫೋಟೋ ತೆಗೆಸಿಕೊಳ್ಳಲು ಅತ್ತಿತ್ತ ಫೋಟೋಗ್ರಫರ್‌ಗಾಗಿ ಹುಡುಕುತ್ತೀರಿ. ಅವರ ಆಟೋಗ್ರಾಫ್ ತೆಗೆದುಕೊಳ್ಳುತ್ತೀರಿ. ಚಿತ್ರನಟಿಯರ ಕಂಡಾಗೆಲ್ಲ ಮುತ್ತಿಕೊಳ್ಳುವ ಜನರನ್ನು, ಅವಳ ಒಂದು ಟಚ್ ಗಾಗಿ, ಒಂದು ಸಹಿಗಾಗಿ ಅದೆಷ್ಟು ಕಷ್ಟಪಡುತ್ತಾರೆ ನೀವೇ ನೋಡಿದ್ದೀರಲ್ಲ.
Friday, March 13, 2009
ಪ್ರಗತಿ ಪರರೇ ನೀವು ನಿಜವಾಗಿಯೂ ಪ್ರಗತಿ ಪರವೇ?
Tuesday, March 10, 2009
ಹೀಗೊಂದು ನಂಬಲಾಗದ ಕತೆ
Monday, February 23, 2009
‘ಸ್ಲಂ ಡಾಗ್’ ಕಾಲದಲ್ಲಿ ‘ಶೌರ್ಯ’ದ ಬೊ(ಹೊ)ಗಳಿಕೆ
ಒಮ್ಮೊಮ್ಮೆ ಹೀಗೇ ಆಗೋದು ನೋಡಿ. ಆ ಡಿವಿಡಿ ತಂದು ಅದೆಷ್ಟೋ ದಿನವಾಗಿತ್ತು. ನನಗೆ ಅತ್ಯಂತ ಪ್ರಿಯವಾದ, ಇಷ್ಟವಾದ ‘ಎ ವೆನ್ಸಡೆ’ ಡಿವಿಡಿಯೊಟ್ಟಿಗೆ ಶೌರ್ಯ ಸಿನಿಮಾದ ಡಿವಿಡಿಯೂ ಇತ್ತು. ಒಮ್ಮೆ ಹಚ್ಚಿ ನೋಡಲು ಕುಳಿತು, ತುರ್ತು ಕೆಲಸದಿಂದ ಬಂದ್ ಮಾಡಿದ್ದೆ. ಶೌರ್ಯ ನೋಡಬೇಕು ಅಂತ ಹಲವು ಬಾರಿ ಅಂದುಕೊಂಡಿದ್ದೆನಾದರೂ, ಕಾಲ ಕೂಡಿ ಬಂದಿರಲಿಲ್ಲ. ಹಿಂದೊಮ್ಮೆ ಗಣೇಶಯ್ಯ ಅವರ ‘ಶಾಲಭಂಜಿಕೆ’ ಪುಸ್ತಕ ಕೂಡ ಹೀಗೇ ಆಗಿತ್ತು. ಆಮೇಲೆ ಓದಿದಾಗ ಛೆ ಮೊದಲೇ ಓದಬಾರದಿತ್ತೆ ಅನ್ನಿಸಿತ್ತು.
Friday, January 09, 2009
ವಿಶ್ವದಲ್ಲೆಲ್ಲ ಮೆಲ್ಟ್‌ಡೌನು, ನನ್ನ ಮನೆಲೆಲ್ಲ ಶಟ್‌ಡೌನು!
ಪ್ರಪಂಚದ ಜನರಿಗೆಲ್ಲ ಮೆಲ್ಟ್ ಡೌನಿನ ಚಿಂತೆ. ನನ್ನ ಮನೇಲೋ ಶಟ್ ಡೌನಿನ ಕಂತೆ!